ಶಿಕ್ಷಣ
1ನೇ ತರಗತಿ ಪ್ರವೇಶಕ್ಕೆ ಕನಿಷ್ಠ 6 ವರ್ಷದಿಂದ ಗರಿಷ್ಠ ವಯೋಮಿತಿಯನ್ನು 8 ವರ್ಷಕ್ಕೆ ಹೆಚ್ಚಿಸಿ ಆದೇಶ

Views: 143
ಬೆಂಗಳೂರು :ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 6 ವರ್ಷಗಳಾಗಿದ್ದು ಗರಿಷ್ಠ ವಯೋಮಿತಿಯನ್ನು 8 ವರ್ಷಕ್ಕೆ ಹೆಚ್ಚಿಸಲಾಗಿದೆ.
ಈ ನಿಯಮ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಿದೆ.
1ನೇ ತರಗತಿಗೆ ವಿದ್ಯಾರ್ಥಿಯನ್ನು ದಾಖಲಿಸಲು ಗರಿಷ್ಠ ವಯೋಮಿತಿಯಾಗಿದ್ದು, ಕನಿಷ್ಠ ವಯೋಮಿತಿ 6 ವರ್ಷಗಳಾಗಿದೆ. 8 ವರ್ಷ ಮೀರಿದ ಮಕ್ಕಳಿಗೆ ಇನ್ನು ಮುಂದೆ 1ನೇ ತರಗತಿಗೆ ಪ್ರವೇಶ ಸಿಗುವುದಿಲ್ಲ.
2025-26ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ವರ್ಷಗಳನ್ನು ನಿಗದಿ ಮಾಡಿದೆ.