ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರಾ ಯೋಗಿ ಆದಿತ್ಯನಾಥ? ಬಿಜೆಪಿ ಜೊತೆ RSS ಸಭೆ..

Views: 140
ಉತ್ತರ ಪ್ರದೇಶದ ರಾಜಕೀಯಕ್ಕೆ ಬಿಸಿ ತಟ್ಟಿದೆ. ಈ ಮಧ್ಯೆ ನಾಳೆ ಮತ್ತು ನಾಡಿದ್ದು ಲಕ್ನೋದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಬಿಜೆಪಿ ಜೊತೆ ಮಹತ್ವದ ಸಭೆ ನಡೆಸಲಿದೆ.
ಆರೆಸ್ಸೆಸ್ ಪ್ರಮುಖ ಅರುಣ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಉತ್ತರ ಪ್ರದೇಶದ ಬಿಜೆಪಿ ಹಿರಿಯ ನಾಯಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಮಾಹಿತಿಗಳ ಪ್ರಕಾರ, ಸರ್ಕಾರ ಮತ್ತು ಸಂಘಟನೆ ನಡುವಿನ ಸಮನ್ವಯತೆ ಹಾಗೂ ಉತ್ತರ ಪ್ರದೇಶಕ್ಕೆ ಸಂಬಂಧಿಸಿದ ಚರ್ಚೆ ನಡೆಯಬಹುದು ಎಂದು ಹೇಳಲಾಗಿದೆ.
ಬಿಜೆಪಿ ಆಡಳಿತ ವೈಖರಿ ಬಗ್ಗೆ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿರುವ ನಡುವೆಯೇ ಸಭೆ ಕರೆದಿರೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಉತ್ತರ ಪ್ರದೇಶದ ಬಿಜೆಪಿಯಲ್ಲಿ ಬದಲಾವಣೆಯ ವದಂತಿಗಳೂ ಕೂಡ ಇವೆ. ಹೀಗಾಗಿ ನಾಳೆಯಿಂದ ನಡೆಯಲಿರುವ ಸಭೆ ಬಗ್ಗೆ ಕುತೂಹಲಗಳು ಹೆಚ್ಚಾಗಿವೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಈ ಬೈಠಕ್ನಲ್ಲಿ ಸಿಎಂ ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಮತ್ತು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಸಿಂಗ್ ಸಭೆಗೆ ಬರುವಂತೆ ತಿಳಿಸಲಾಗಿದೆ.
ಉತ್ತರಪ್ರದೇಶದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅದಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ತಯಾರಿ ನಡೆಸ್ತಿದ್ದಾರೆ. ಈ ಉಪಚುನಾವಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘಧ ಸಭೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಅವರ ಪ್ರಯಾಗರಾಜ್ ಭೇಟಿಯನ್ನು ಮುಂದೂಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಸೋಲಾಗಿದೆ. ಕಡಿಮೆ ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ನಿರಂತರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.






