ಕರಾವಳಿ
ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ದಾರುಣ ಸಾವು

Views: 209
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಸಮೀಪ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮಂಗಳೂರಿನ ಕಾಲೇಜೊಂದರಲ್ಲಿ ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಆಶ್ನಿ ಶೆಟ್ಟಿ(21) ಎಂದು ಗುರುತಿಸಲಾಗಿದೆ.
ತಂದೆಯೊಂದಿಗೆ ಮನೆಯ ದನಗಳನ್ನು ಕಟ್ಟಲು ಹೋಗುತ್ತಿದ್ದ ಸಂದರ್ಭ ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ್ದು, ತೀವ್ರ ಅಸ್ವಸ್ಥ ಗೊಂಡ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.