ಶಿಕ್ಷಣ

ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

"ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯವನ್ನು ನಾಶಮಾಡುವುದರಿಂದ ಹವಾಮಾನದಲ್ಲಿ  ವೈಪರಿತ್ಯ ಹಾಗೂ ದಿನನಿತ್ಯ ಹತ್ತಾರು ಸಮಸ್ಯೆಗಳನ್ನು ಕಾಣುತ್ತಿದ್ದೇವೆ, ನಮ್ಮ ಬದುಕು ಸಂತಸದಾಯಿಕವಾಗಿ ಸಾಗಬೇಕಾದರೆ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಹಸಿರು ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ." 

Views: 235

ಕುಂದಾಪುರ: ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಲಿಟ್ಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಯಡಾಡಿ- ಮತ್ಯಾಡಿ, ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಮತ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

“ಇಂದು ಅಭಿವೃದ್ಧಿ ಹೆಸರಿನಲ್ಲಿ ನಮ್ಮ ದೇಶದ ಬಹುಪಾಲು ಅರಣ್ಯವನ್ನು ಕಡಿಯಲಾಗಿದ್ದು ಹಾಗಾಗಿ ಹವಾಮಾನದಲ್ಲಿ ಸಾಕಷ್ಟು ವೈಪರೀತ್ಯ ಕಾಣುತ್ತಿದ್ದೇವೆ. ನಮ್ಮ ಬದುಕು ಸಂತಸದಾಯಿಕವಾಗಿ ಸಾಗಬೇಕಾದರೆ ಹಸಿರು ಗಿಡಮರಗಳು ಅತ್ಯಗತ್ಯ. ಪ್ರತೀ ವರ್ಷ ವನಮಹೋತ್ಸವ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಹೆಚ್ಚುಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಸರ್ಕಾರದ ಆಲೋಚನೆಯಲ್ಲಿ ಲಯನ್ ಕ್ಲಬ್ ಮೊದಲಾದ ಸಂಸ್ಥೆಗಳು ಕೈಜೋಡಿಸುತ್ತಿವೆ.ಪ್ರತೀ ವರ್ಷ ಶಾಲೆಗಳಲ್ಲಿ ನಡೆಸುತ್ತಿರುವ ವನಮಹೋತ್ಸವ ಕಾರ್ಯಕ್ರಮಗಳು ಶ್ಲಾಘನೀಯ.ಹಸಿರು ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ” ಎಂದು ಲಯನ್ಸ್ ಕ್ಲಬ್ ಜಿಲ್ಲಾ ರಾಯಬಾರಿ ಆಗಿರುವ Ln. ಬಿ.ಅರುಣ್ ಕುಮಾರ್ ಹೆಗ್ಡೆ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸಭೆಯಲ್ಲಿ ಅಭ್ಯಾಗತರಾಗಿದ್ದ ಅರಣ್ಯ ಅಧಿಕಾರಿಗಳಾದ ಮಂಜುನಾಥ ಗಣಪತಿ ನಾಯ್ಕ್ ಮಾತನಾಡುತ್ತ 1950ರಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಕೆ.ಎನ್. ಮುನ್ಷಿ ಅವರಿಂದ ಆರಂಭವಾದ ವನಮಹೋತ್ಸವ ಕಾರ್ಯಕ್ರಮ ಇಂದು ಹಸಿರು ಪರಿಸರ ನಿರ್ಮಾಣದಲ್ಲಿ ತುಂಬಾ ಸಹಕಾರಿಯಾಗಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಅವರು ಮಾತನಾಡುತ್ತಾ, ವನಮಹೋತ್ಸವದಂತಹ ಹಲವಾರು ಅರಿವು ಮತ್ತು ಜಾಗ್ರತಿ ಮೂಡಿಸುವ ಕಾರ್ಯಕ್ರಮವನ್ನು ನಮ್ಮ ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಾಗಲಿದೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಯ ಅಧ್ಯಕ್ಷರಾದ Ln ಯು.ಎಸ್.ಮೋಹನ್ ದಾಸ್ ಶೆಟ್ಟಿ ಮಾತನಾಡುತ್ತಾ, ಇಂದು ವಿಶ್ವದಾದ್ಯಂತ ಲಯನ್ಸ್ ಕ್ಲಬ್ ಹಲವಾರು ಜನುಪಯೋಗಿ ಕಾರ್ಯಕ್ರಮಗಳನ್ನು ನಡೆಸಿ ಒಂದು ಮಾದರಿ ಸಂಸ್ಥೆಯಾಗಿ ಸೇವೆ ಸಲ್ಲಿಸುತ್ತಿದೆ ಎಂದರು.ಸಭೆಯಲ್ಲಿ ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರಾದ Ln.ಸುಬ್ಬಣ್ಣ ಶೆಟ್ಟಿ,ಲಯನ್ಸ್ ಕ್ಲಬ್ ಕಾರ್ಯದರ್ಶಿ ಯಾದ Ln.ಉದಯ ಕುಮಾರ್ ಶೆಟ್ಟಿ, ಖಜಾಂಚಿ Ln.ದಯಾನಂದ, ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಪ್ರತಾಪ್ ಚಂದ್ರ ಶೆಟ್ಟಿ,ಭರತ್ ಶೆಟ್ಟಿ ,ಲಯನ್ಸ್ ಕ್ಲಬ್ ನ ಜಿಲ್ಲಾ ಕ್ಯಾಬಿನೆಟ್ ಸದಸ್ಯರಾದ Ln.ಬಾಲಕೃಷ್ಣ ಹೆಗ್ಡೆ, Ln. ಜಗನ್ನಾಥ ಶೆಟ್ಟಿ, Ln. ರತ್ನಾಕರ ಶೆಟ್ಟಿ, Ln. ದೀನ್ ಪಾಲ್ ಶೆಟ್ಟಿ, Ln. ಚಂದ್ರ ಕುಲಾಲ್, Ln. ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಪ್ರದೀಪ್ ಸ್ವಾಗತಿಸಿ ಶಿಕ್ಷಕ ಸಂತೋಷ್ ಕುಮಾರ್ ನಿರೂಪಿಸಿ ವಂದಿಸಿದರು.

 

Related Articles

Back to top button