ಸಾಂಸ್ಕೃತಿಕ
ಕುಂದಾಪುರ:ದರ್ಶನ್ ಬಿಡುಗಡೆಗೆ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬಂದ ಪತ್ನಿ ವಿಜಯಲಕ್ಷ್ಮಿ

Views: 111
ಕುಂದಾಪುರ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಗುರುವಾರ ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇನ್ನೊಂದೆಡೆ ಪೊಲೀಸರು ಕೊಲೆ ಪ್ರಕರಣದ ಚಾರ್ಜ್‌ಶೀಟ್ ರೆಡಿ ಮಾಡುತ್ತಿದ್ದಾರೆ. ಈ ಎಲ್ಲಾ ಸಂಕಷ್ಟ ಪರಿಹಾರಕ್ಕೆ ಪತ್ನಿ ವಿಜಯಲಕ್ಷ್ಮಿ ಅವರು ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಪ್ತರ ಜೊತೆ ಆಗಮಿಸಿರುವ ಅವರು ಮೂಕಾಂಬಿಕಾ ದೇವಿಯ ವಿಶೇಷ ದರ್ಶನ ಪಡೆದಿದ್ದಾರೆ.
ಗಂಡನ ಬಿಡುಗಡೆಗೆ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಗುರುವಾರ ಸಂಕಲ್ಪ, ಪಾರಾಯಣ ಮಾಡಿಸಿದ್ದಾರೆ. ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ದರ್ಶನ್‌ಗಾಗಿ ನವ ಚಂಡಿಕಾಯಾಗ ನಡೆಯಲಿದೆ ಎಂದು ತಿಳಿದು ಬಂದಿದೆ.






