ಇತರೆ

ಪೊಲೀಸರ ಮೇಲೆಯೇ ಹಲ್ಲೆ: ಕಳ್ಳನ ಕಾಲಿಗೆ ಗುಂಡೇಟು

Views: 256

ಹುಬ್ಬಳ್ಳಿ:ಜ್ಯುವೆಲ್ಲರಿ ಮಳಿಗೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಉಳಿದ ಆರೋಪಿಗಳನ್ನು ಬಂಧಿಸಲು ಪ್ರಮುಖ ಆರೋಪಿಯನ್ನು ಕರೆದೊಯ್ದಾಗ ಪೊಲೀಸರ ಮೇಲೆಯೇ ಆತ ಹಲ್ಲೆ ನಡೆಸಿದಾಗ ಪೊಲೀಸರು ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿ ಗಾಯಗೊಂಡಿದ್ದಾನೆ.

ಇಲ್ಲಿನ ಕೇಶ್ವಾಪುರದ ರಮೇಶ ಭವನ ಬಳಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು

ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್‌‍ ಬಳಿ ದರೋಡೆಕೋರ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಸಿಬ್ಬಂದಿಗಳೊಂದಿಗೆ ತೆರಳಿದ್ದಾಗ ಪೊಲೀಸರನ್ನು ಕಂಡು ಅವರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆ ವೇಳೆ ಪೊಲೀಸರು ಶರಣಾಗುವಂತೆ ಸೂಚಿಸಿ ಒಂದು ಸುತ್ತು ಗುಂಡು ಹಾರಿಸಿದರಾದರೂ ಪೊಲೀಸರ ಮಾತನ್ನು ಲೆಕ್ಕಿಸದೆ ಮತ್ತೆ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿ ಕುಸಿದು ಬಿದ್ದಿದ್ದಾನೆ. ಆರೋಪಿ ಮುಂಬೈ ಮೂಲದ ರ್ಹಾನ್‌ ಶೇಖ್‌ನನ್ನು ಸುತ್ತುವರೆದು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಮಳಿಗೆಯಲ್ಲಿನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿ ರ್ಹಾನ್‌ ಶೇಖ್‌ನನ್ನು ವಶಕ್ಕೆ ಪಡೆದಿದ್ದರು.

Related Articles

Back to top button
error: Content is protected !!