ರಾಜಕೀಯ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಬೇಟಿ :ಸಂಪುಟ ಪುನರ್‌ರಚನೆ ಚರ್ಚೆ..!

Views: 49

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ತೆರಳಿದ್ದಾರೆ. ಮಂಗಳವಾರ ಬೆಳಿಗ್ಗೆ ದೆಹಲಿ ವಿಮಾನ ಏರಿದ ಡಿಕೆಶಿ ಮತ್ತು ಸಿದ್ದರಾಮಯ್ಯ, ಹೈಕಮಾಂಡ್ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಸಂಪುಟ ಪುನರ್‌ರಚನೆ ಚರ್ಚೆ

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಸಂಪುಟ ಪುನರ್‌ರಚನೆಯ ಚರ್ಚೆಗೂ ಇಂಬು ನೀಡಿದೆ. ನಾಲ್ಕೈದು ಸಚಿವರನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದೆ. ಇದೇ ಆತಂಕದಲ್ಲಿ ದೆಹಲಿಗೆ ಕೆಲವು ಸಚಿವರುಗಳೂ ದೌಡಾಯಿಸಿದ್ದಾರೆ.

ಈ ಮಧ್ಯೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಕುರಿತಾಗಿ ಮಧುಸೂಧನ್ ಮಿಸ್ತ್ರಿ ಸಮಿತಿಯ ಸತ್ಯಶೋಧನಾ ವರದಿ ಹೈಕಮಾಂಡ್ ಕೈ ಸೇರಿದೆ. ಈ ವರದಿ ಆಧಾರದಲ್ಲಿ ಹೈಕಮಾಂಡ್ ಕೆಲ ಸಲಹೆ ಸೂಚನೆಗಳೊಂದಿಗೆ ಸಂಪುಟ ಪುನರ್‌ರಚಿಸುವ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ. ಮಿಸ್ತ್ರಿ ಸಮಿತಿ ರಾಜ್ಯದ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸಚಿವರ ಕಾರ್ಯವೈಖರಿಯ ಬಗ್ಗೆಯೂ ಮಾಹಿತಿ ಸಂಗ್ರಹಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ?

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಗೋಚರಿಸಿದೆ. ಎಐಸಿಸಿ ನಿಯಮದಂತೆ ಒಬ್ಬ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದುವಂತಿಲ್ಲ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಡಿಸಿಎಂ ಸ್ಥಾನ ಹೊಂದಿರುವುದರಿಂದ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚಿಸುವ ಸಾಧ್ಯತೆ ದಟ್ಟವಾಗಿದೆ.

ಕಳೆದ ತಿಂಗಳ ದೆಹಲಿ ಭೇಟಿ ವೇಳೆ ಮಲ್ಲಿಕಾರ್ಜುನ ಖರ್ಗೆ ಕೆಪಿಸಿಸಿ ಹುದ್ದೆಗೆ ರಾಜೀನಾಮೆ ನೀಡುವ ಬಗ್ಗೆ ಸೂಚಿಸಿದ್ದರು ಎನ್ನಲಾಗಿದೆ. ಇತ್ತ ಮಧುಸೂದನ್ ಮಿಸ್ತ್ರಿ ಕೆಪಿಸಿಸಿ ಅಧ್ಯಕ್ಷಗಿರಿಯ ಬಗ್ಗೆಯೂ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ ಹೆಸರುಗಳು ಕೇಳಿ ಬರುತ್ತಿವೆ.

Related Articles

Back to top button
error: Content is protected !!