ಸಾಮಾಜಿಕ

ಗಂಡನ ಅಕ್ರಮ ಸಂಬಂಧಕ್ಕೆ ಮನನೊಂದು ಲೈವ್ ವಿಡಿಯೋ ಮಾಡಿ ಹೆಂಡತಿ ಆತ್ಮಹತ್ಯೆಗೆ ಶರಣು

Views: 181

ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಮನನೊಂದ ಹೆಂಡತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ನಿವಾಸಿ ಮಾನಸಾ (25) ಮೃತ ಮಹಿಳೆ. ಮೃತ ಮಹಿಳೆ ಮೊಬೈಲ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತಾನೇ ಚಿತ್ರೀಕರಿಸಿಕೊಂಡಿರುವ ವಿಡಿಯೋ ಪತ್ತೆಯಾಗಿದೆ.

ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೆಲ ಹೊತ್ತಿನ ಬಳಿಕ ಗಂಡ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆ ತಂದೆ ನೀಡಿದ ದೂರಿನ ಮೇರೆಗೆ ಮಾನಸಾ ಪತಿ ದಿಲೀಪ್ ನನ್ನು ಬ್ಯಾಡರಹಳ್ಳಿ ಠಾಣ ಪೊಲೀಸರು ಬಂಧಿಸಿದ್ದಾರೆ.

6 ವರ್ಷದ ಹಿಂದೆ ಪ್ರೀತಿಸಿ ಮಾನಸಾ ಹಾಗೂ ದಿಲೀಪ್ ವಿವಾಹವಾಗಿದ್ದು, ಈ ದಂಪತಿಗೆ 3 ವರ್ಷದ ಹೆಣ್ಣು ಮಗುವಿದೆ.ಗಂಡನ ಅಕ್ರಮ ಸಂಬಂಧ ವಿಚಾರವಾಗಿ ಆಗಾಗ್ಗೆ ದಂಪತಿಗಳ ನಡುವೆ ನಿತ್ಯ ಜಗಳವಾಗುತ್ತಿತ್ತು.ಮಹಿಳೆಯ ಗಂಡ ದಿಲೀಪ್ ಮಾನಸಾಗೆ ಹೊಡೆಯೋದು ಬಡಿಯೋದು ಮಾಡುತ್ತಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕಿರುಕುಳ ಸಹಿಸಲಾರದೆ ಮಾನಸಾ ಆತ್ಮಹತ್ಯೆಗೆ ನಿರ್ಧರಿಸಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!