ಶಿಕ್ಷಣ
ದ.ಕನ್ನಡ ಜಿಲ್ಲೆಯಲ್ಲಿ ಜುಲೈ.31ರಂದು ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ

Views: 95
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ.31ರಂದು ಬುಧವಾರ ಪದವಿಪೂರ್ವ ಕಾಲೇಜುವರೆಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಅಬ್ಬರ, ಪ್ರವಾಹ ಹಿನ್ನೆಲೆಯಲ್ಲಿ ಜುಲೈ.31ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜನರು ತಗ್ಗು ಪ್ರದೇಶಗಳಿಗೆ ತೆರಳದಂತೆ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.