ಯುವಜನ

ಉಡುಪಿ: ಕಿರಿಯ ಆರೋಗ್ಯ ಸಹಾಯಕರ ನೇಮಕಾತಿಗೆ ಅಧಿಸೂಚನೆ

Views: 319

“ಕನ್ನಡ ಕರಾವಳಿ” ಉದ್ಯೋಗ ಮಾಹಿತಿ

ಉಡುಪಿ: ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳ ಭರ್ತಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಿಎಂ ಅಭಿಮ್ ಯೋಜನೆಯಡಿ ನಮ್ಮ ಕ್ಲಿನಿಕ್‌ಗಳಿಗೆ ನೇಮಕಾತಿ ನಡೆಯಲಿದ್ದು, ಇವು ಗುತ್ತಿಗೆ ಆಧಾರದ ಹುದ್ದೆಗಳಾಗಿವೆ.

ಹುದ್ದೆಗಳ ವಿವರ: ಒಟ್ಟು ಹುದ್ದೆಗಳ ಸಂಖ್ಯೆ 6. ಉಡುಪಿಯಲ್ಲಿ 3, ಕುಂದಾಪುರದಲ್ಲಿ 2 ಮತ್ತು ಕಾರ್ಕಳದಲ್ಲಿ 1 ಹುದ್ದೆಗಳಿವೆ.

ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಉತ್ತೀರ್ಣರಾಗಿದ್ದು, ಅರೆ ವೈದ್ಯಕೀಯ ಮಂಡಳಿಯ ಡಿಪ್ಲೊಮಾ ಪದವಿ ಹೊಂದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳ ವಿದ್ಯಾರ್ಹತೆಗೆ ಅನುಗುಣವಾಗಿ ಮಾಸಿಕ 14,044ರಿಂದ 15,397 ರೂ ವೇತನ.

ಆಯ್ಕೆ: ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ನಿಗದಿತ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ವಿಳಾಸ: ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಎನ್‌ಹೆಚ್‌ಎಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ.

ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಆಗಸ್ಟ್ 3. ಹೆಚ್ಚಿನ ಮಾಹಿತಿಗೆ udupi.nic.in ಇಲ್ಲಿಗೆ ಭೇಟಿ ನೀಡಿ. 0820-2985429 ಈ ಕಚೇರಿ ದೂರವಾಣಿ ಸಂಖ್ಯೆಗೂ ಸಂಪರ್ಕಿಸಬಹುದು.

Related Articles

Back to top button
error: Content is protected !!