ಯುವಜನ
ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

Views: 115
ಬಳ್ಳಾರಿ : ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧಿಸಿದ ಹಿನ್ನಲೆ ಪ್ರೇಮಿಗಳು ಮನನೊಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ನಡೆದಿದೆ.
ರಾಜು (23) ಹಾಗೂ ಪವಿತ್ರಾ(20) ಮೃತ ದುರ್ಧೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಹೊರ ಬಂದಿದ್ದ ರಾಜು ಹಾಗೂ ಪವಿತ್ರಾ, ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.






