ಇತರೆ

ವರ್ಗಾವಣೆ ದಂಧೆಗೆ  PSI ಪರಶುರಾಮ್ ಬಲಿ…ಯಾದಗರಿ ಎಂಎಲ್ಎ ಹಾಗೂ ಎಂಎಲ್ಎ ಮಗ ಇಬ್ಬರನ್ನೂ ಅರೆಸ್ಟ್ ಮಾಡಿ: ಪಿಎಸ್ಐ ಪತ್ನಿ ಶ್ವೇತಾ

Views: 620

ಬೆಂಗಳೂರು:ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಪಡೆದುಕೊಂಡಿದೆ. PSI ಪರಶುರಾಮ್ ರವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೊಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ‌ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಗಾಗಿ ಆಗ್ರಹಿಸುತ್ತಿದ್ದಾರೆ.

ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ನಗರದ ಖಾಸಗಿ ಆಸ್ಪತ್ರೆ ಬಳಿ ವಿವಿಧ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಅಡ್ಡಗಟ್ಟಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಇನ್ನು ಪಿಎಸ್ಐ ಪತ್ನಿ ಶ್ವೇತಾ, ಪತಿಯನ್ನು ಕಳೆದುಕೊಂಡು ಕಣ್ಣೀರು ಇಡುತ್ತಿದ್ದಾರೆ. ಮಾಧ್ಯಮದ ಮುಂದೆ ಪರಶುರಾಮ ಪತ್ನಿ ಶ್ವೇತಾರವರು, ‘ಶಾಸಕ ಚೆನ್ನಾರೆಡ್ಡಿ ಪಾಟೀಲ್ 30/ 40 ಲಕ್ಷ ಹಣ ಕೇಳಿದ್ದಾರೆ. ಸಾಕಷ್ಟು ಭಾರೀ ಹಣ ಕೇಳ್ತಿರುವ ಬಗ್ಗೆ ‌ನನಗೆ ಹೇಳಿದ್ದಾರೆ. ಎಂಎಲ್ಎ ಹಾಗೂ ಎಂಎಲ್ಎ ಮಗ ಹಣ ಕೇಳಿದ್ದಾರೆ. ಇಬ್ಬರನ್ನೂ ಕರೆಸಿ ಅವರು ಅರೆಸ್ಟ್ ಮಾಡಬೇಕು’ ಎಂದು ಹೇಳಿದ್ದಾರೆ.

Related Articles

Back to top button
error: Content is protected !!