ಜನಮನ

ಕುಂದಾಪುರ: ಹೈಕಾಡಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ

Views: 279

ಕುಂದಾಪುರ: ಲಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ.

ನಾಗರಾಜ್ ಅವರು ಬೆಳ್ವೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.‌

ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು  ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!