ಇತರೆ
ಒಂಟಿ ಮಹಿಳೆ ಕತ್ತು ಹಿಸುಕಿ ಕೊಲೆ…!

Views: 83
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಒಂಟಿ ಮಹಿಳೆಯ ಕೊಲೆಯಾಗಿದೆ. ಕತ್ತು ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ತಡರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ಮಹಿಳೆಯ ಕೊಲೆಯಾಗಿದೆ. ಸಾವಿತ್ರಮ್ಮ (65) ಕೊಲೆಯಾದವರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಕೊಲೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ. ಇನ್ನಷ್ಟೇ ತಿಳಿಯಬೇಕಾಗಿದೆ.






