ಕರಾವಳಿ

ಕಾರವಾರದ ಸುರಂಗ ಮಾರ್ಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದು ಟನೆಲ್‌ ಬಂದ್‌

Views: 88

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button