ಜನಮನ
ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

Views: 145
ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಗಚಕುಪ್ಪೆಯಲ್ಲಿ ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ಈ ಹಿಂದೆ ಬಿಡದಿ, ಮೈಸೂರು ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇವರು ಮೂಲತಃ ಚನ್ನಪಟ್ಟಣ ತಾಲೂಕಿನವರಾಗಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.






