ರಾಜಕೀಯ

ಉಡುಪಿ, ದಕ್ಷಿಣ ಕನ್ನಡ:ನಗರಸಭೆ,ಪುರಸಭೆ,ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ  ಮೀಸಲಾತಿ ಪ್ರಕಟ

Views: 107

ಉಡುಪಿ :ಒಂದು ವರ್ಷಕ್ಕೂ ಅಧಿಕ ಕಾಲದಿಂದ ನೆನೆಗುದಿಗೆ ಬಿದ್ದಿದ್ದ 61 ನಗರ ಸಭೆ, 123 ಪುರಸಭೆ, ಹಾಗೂ 117 ಪಟ್ಟಣ ಪಂಚಾಯಿತಿಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿ ಸೂಚನೆ ಹೊರಡಿಸಿದೆ

ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಜೆ ಪರಿಶಿಷ್ಟ ಜಾತಿ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಪ್ರಕಟಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ:   ಪುತ್ತೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ “ಎಸ್‌ಸಿ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ಉಳ್ಳಾಲ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ “ಎಸ್‌ಸಿ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ) ಮೀಸಲಾತಿ ಪ್ರಕಟಗೊಂಡಿದೆ.

ಬಂಟ್ವಾಳ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಮೀಸಲಾತಿ ಪ್ರಕಟವಾಗಿದೆ. ಮೂಡುಬಿದಿರೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ)’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’

ಬಜಪೆ ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಬಿ (ಮಹಿಳೆ)’, ಬೆಳ್ತಂಗಡಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಕಡಬ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಕಿನ್ನಿಗೋಳಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’

ಕೋಟೆಕಾರ್‌ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಎ’, ಮೂಲ್ಕಿ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಸುಳ್ಯ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ ಮಹಿಳೆ’, ಉಪಾಧ್ಯಕ್ಷ ಸ್ಥಾನಕ್ಕೆ “ಸಾಮಾನ್ಯ’, ವಿಟ್ಲ ಪ. ಪಂ. ಅಧ್ಯಕ್ಷ ಸ್ಥಾನಕ್ಕೆ “ಹಿಂದುಳಿದ ವರ್ಗ ಬಿ’, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ)

Related Articles

Back to top button
error: Content is protected !!