ಇತರೆ

ಮಂಗಳೂರು:ಪಣಂಬೂರು ಬಳಿ ಅಪ್ರಾಪ್ತ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ

Views: 557

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿದ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಎಂಬಲ್ಲಿ ನಡೆದಿದೆ.

ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು.

ಈ ದಿನ ಆಗಸ್ಟ್ 6 ರಂದು ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಸಮಯ ಸುಮಾರು ಬೆಳ್ಳಿಗ್ಗೆ 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ತಿಳಿಸಿದಾಗ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಕೊಲೆ ಮಾಡಿದ ರೀತಿ ಕಂಡುಬಂದಿರುತ್ತದೆ ಎಂದು ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದರು ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತನಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ ಮೇರೆಗೆ ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ.

ಸ್ಥಳಕ್ಕೆ ಅನುಪಮ್ ಅಗರವಾಲ್ ಪೊಲೀಸ್ ಆಯುಕ್ತರು ಮಂಗಳೂರು ನಗರ , ದಿನೇಶ್ ಕುಮಾರ್ ಉಪಪೊಲೀಸ್ ಆಯುಕ್ತರು ಅಪರಾಧ ಮತ್ತು ಸಂಚಾರ , ಉತ್ತರ ಉಪ ವಿಭಾಗದ ಅಧಿಕಾರಿಗಳು ಮತ್ತು ಪಣಂಬೂರು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!