ರಾಜಕೀಯ
ಇಂದಿನಿಂದಲೇ ಎರಡೂ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆ

Views: 86
ಮಂಡ್ಯ: ಕೆಲವು ತಾಂತ್ರಿಕ ದೋಷಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮೀ ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.
ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಷಣ ಮಾಡುವಾಗ ಮಹಿಳೆಯರು ಗೃಹಲಕ್ಮಿ ಹಣ ಬಂದಿಲ್ಲ ಎಂದು ಹೇಳಿದ್ದರು. ಹೌದು, ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಆದರೆ, ಇಂದಿನಿಂದ ಜೂನ್ ಮತ್ತು ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದರು.






