ಕರಾವಳಿ

ಕಾನೂನು ಪದವೀಧರ ಕೆಲಸ ಸಿಗದೆ  ಮನನೊಂದು ಆತ್ಮಹತ್ಯೆ

Views: 184

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಾಣಿ ಪಟ್ಲಕೋಡಿ ನಿವಾಸಿ ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ

ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದ. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಂದೆ,ತಾಯಿ, ಸಹೋದರ,ಸಹೋದರಿಯನ್ನು ಅಗಲಿದ್ದಾರೆ.

Related Articles

Back to top button
error: Content is protected !!