ಶಿಕ್ಷಣ

ಶಾಲೆಯಲ್ಲೇ ನೇಣು ಬಿಗಿದುಕೊಂಡು ಮುಖ್ಯೋಪಾಧ್ಯಾಯ ಆತ್ಮಹತ್ಯೆ 

Views: 205

ವಿಜಯಪುರ: ಬಸವನಬಾಗೇವಾಡಿ ಸಮೀಪದ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಸಿ.ಎಸ್.ಹಡಪದ (54) ಶಾಲೆಯಲ್ಲೇ ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷದಿಂದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕಳೆದ ಒಂದು ವರ್ಷದಿಂದ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತಿದ್ದರು. ಶಾಲೆ ಆರಂಭವಾಗಿರುವಾಗಲೇ ಸ್ಟಾಕ್‌ರೂಂಗೆ ಹೋಗಿ ನೇಣು ಬಿಗಿದುಕೊಂಡಿದ್ದಾರೆ. ಶಾಲಾ ಅವಧಿ ಮುಗಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಸಿ.ಎಸ್.ಹಡಪದ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರ ಕಿರುಕುಳದಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಆರೋಪಿಸಿದ್ದಾರೆ.

ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

 

 

Related Articles

Back to top button