ಇತರೆ

ಬಸ್ -ಆಟೋ ನಡುವೆ ಭೀಕರ ಅಪಘಾತ; ತಾಯಿ, ಮಕ್ಕಳು ಸಾವು

Views: 137

ಬೀದರ್ : ಬಸ್ -ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.

ಅಪಘಾತದಲ್ಲಿ ಅನಿತಾ ಬಾಯಿ (45) ಮತ್ತು ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಆಟೋ ನಜ್ಜು ಗುಜ್ಜಾಗಿದ್ದು, ಸಂಪೂರ್ಣ ಜಖಂಗೊಂಡಿದೆ. ಬಸ್ ಬೀದರ್ ನಿಂದ ಮಹಾರಾಷ್ಟ್ರದ ಲಾತೂರ್ ಗೆ ಸಾಗುತ್ತಿತ್ತು ಎನ್ನಲಾಗಿದೆ.

ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್‌ನ ಹೊನ್ನಕೇರಿ ತಾಂಡಾ ನಿವಾಸಿಗಳು ಎಂದು ತಿಳಿದುಬಂದಿದೆ.

Related Articles

Back to top button
error: Content is protected !!