ಇತರೆ

ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ.‌!

Views: 133

ಚಿಕ್ಕಬಳ್ಳಾಪುರ ಅಂಗನವಾಡಿಯ ಫುಡ್ ಪಾಕೆಟ್‌ನಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹಾಗೂ ಗುಡಿಬಂಡೆ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿರುವ ಆಹಾರ ತಯಾರಿಕಾ ಘಟಕ ಹಾಗೂ ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ವೇಳೆ ಹಾಜರಿದ್ದು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಆಹಾರ ಪದಾರ್ಥಗಳ ಸ್ಯಾಂಪಲ್‌ನ್ನ ಪರಿಶೀಲಿಸಿ ಲ್ಯಾಬ್‌ಗೆ ಕಳಿಸಿಕೊಟ್ಟಿದ್ದಾರೆ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಿಂದ ವಿತರಿಸಲಾಗಿದ್ದ ಬೆಲ್ಲದ ಪುಡಿಯ ಪಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂದಿಸಿದಂತೆ, ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆಹಾರ ಸುರಕ್ಷತಾ ವಿಭಾಗ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹರೀಶ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಬಾಗೇಪಲ್ಲಿ ಪಟ್ಟಣದಲ್ಲಿರುವ ಅಂಗನವಾಡಿಗಳ ಆಹಾರ ಪದಾರ್ಥಗಳನ್ನು ತಯಾರಿಸುವ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಸಹ ಭೇಟಿ ನೀಡಿ ಮಾಹಿತಿ ಪಡೆದ್ದಾರೆ. ಬೆಲ್ಲದ ಪುಡಿ ಸೇರಿದಂತೆ ಹಲವು ಆಹಾರ ವಸ್ತುಗಳ ಸ್ಯಾಂಪಲ್ ಪಡೆದು ಲ್ಯಾಬ್ ಗೆ ಕಳಿಸಿದ್ದಾರೆ. ಇನ್ನು ಘಟನೆ ಸಂಬಂಧ ವರದಿಯನ್ನ ಸರಕಾರಕ್ಕೆ ಕಳಿಸಿದ್ದು, ಜೊತೆಗೆ ಬೆಲ್ಲದ ಪುಡಿಯನ್ನ ಸಪ್ಲೆ ಮಾಡಿದ್ದ ಕೋಲಾರದ ಮಾರುತಿ ಟ್ರೇಡರ್ಸ್ ಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್ ಸತ್ಯನಾರಾಯಣರೆಡ್ಡಿ, ಸಿಡಿಪಿಓ ರಾಮಚಂದ್ರ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

 

Related Articles

Back to top button
error: Content is protected !!