ರಾಜಕೀಯ

ಶೀಘ್ರವೇ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ

Views: 81

ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯದೇ ಇರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಚುನಾವಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.

ಗದಗ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕಾನೂನಾತ್ಮಕವಾಗಿ ಚುನಾವಣೆ ಮಾಡಬೇಕಾಗಿದೆ. ಈ ಬಗ್ಗೆ ಈಗಾಗಲೇ ಉಚ್ಛ ನ್ಯಾಯಾಲಯ ಶೀಘ್ರ ಚುನಾವಣೆ ನಡೆಸುವಂತೆ ಹೇಳಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಮಾಡುವುದಕ್ಕೆ ತಯಾರು ಮಾಡಿಕೊಂಡಿದ್ದೇವೆ.  ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮೀಸಲಾತಿ ಕುರಿತು ಸಾಕಷ್ಟು ಚರ್ಚೆಯಾಗಿದೆ. ಆದಷ್ಟು ಬೇಗ ಮೀಸಲಾತಿ ಘೋಷಿಸಿ ಚುನಾವಣೆ ನಡೆಸಲಾಗುವುದು ಎಂದರು.

Related Articles

Back to top button
error: Content is protected !!