ಉತ್ತರ ಕನ್ನಡ:ಅಂಕೋಲ, ಹೊನ್ನಾವರ, ಭಟ್ಕಳ ಮತ್ತೆ ಭೂ ಕುಸಿತ ಭೀತಿ :ನಿಷೇಧಾಜ್ಞೆ ಜಾರಿ

Views: 203
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಶಿರೂರಿನ ಹೆದ್ದಾರಿಯ ಮತ್ತೊಂದು ಭಾಗದಲ್ಲಿ ನಾಲ್ಕಕ್ಕೂ ಹೆಚ್ಚು ಕಡೆ ಭೂ ಕುಸಿತವಾಗುತ್ತಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಜುಲೈ 16 ರಂದು ಭೂ ಕುಸಿತವಾಗಿ 11 ಜನರು ಸಾವನ್ನಪ್ಪಿದ್ದರು. ಇದರಲ್ಲಿ ಮೂರು ಜನರ ಶವ ಶೋಧಕ್ಕಾಗಿ ಕಾರ್ಯಾಚರಣೆ ಮಾಡಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಜಿಎಸ್‌ಐ ತಜ್ಞರ ತಂಡ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದೆ. ಜೊತೆಗೆ ಜಿಲ್ಲೆಯ ಭೂ ಕುಸಿತ ಭಾಗವನ್ನು ನಾಲ್ಕು ಭಾಗವಾಗಿ ವಿಂಗಡಿಸಲಾಗಿದೆ. ಕಾರವಾರ, ಅಂಕೋಲ, ಹೊನ್ನಾವರ, ಭಟ್ಕಳ ಭಾಗದ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂ ಕುಸಿತ ಯಾವ ಸಂದರ್ಭದಲ್ಲಿಯಾದರೂ ಆಗಬಹುದು ಎಂದು ಎಚ್ಚರಿಸಿದೆ.
ಹೆದ್ದಾರಿಯಲ್ಲಿ ಘಟನೆ ನಡೆದ ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಇದೇ ಭಾಗದಲ್ಲಿ ಮತ್ತೆ ಭೂ ಕುಸಿತವಾಗುವುದರಿಂದ ಶಿರೂರಿನ ಗುಡ್ಡದ ಪ್ರದೇಶದ ನಿವಾಸಿಗಳು ಹಾಗೂ ಗಂಗಾವಳಿ ತೀರ ಪ್ರದೇಶದ ಉಳುವೆರೆ ಗ್ರಾಮದ ಜನರಿಗೆ ಬೇರೆಡೆ ವಸತಿ ವ್ಯವಸ್ಥೆ ಮಾಡಿಕೊಳ್ಳುವಂತೆ ಅಂಕೋಲ ತಹಶಿಲ್ದಾರ್ ಆದೇಶ ನೀಡಿದ್ದಾರೆ.