ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್

Views: 57
ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನ್ಯಾಯಾಲಯದಲ್ಲಿ ಸರ್ಕಾರ ವಿಚಾರಣೆ ಮುಂದೂಡಲಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅರ್ಜಿಯ ವಿಚಾರಣೆ ವೇಳೆ ಸಿಐಡಿ ಪರ ವಾದ ಮಂಡಿಸಿದ ವಿಶೇಷ ವಕೀಲರು, ಪ್ರಕರಣ ಸಂಬಂಧ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ ಮಾಡಬೇಕಾಗಿದೆ. ಇದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಸಿಐಡಿ ಪರ ವಕೀಲರು ವಾದವನ್ನು ಆಲಿಸಿದ ಪೀಠ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿ, ಈ ಹಿಂದೆ ನೀಡಿರುವ ಆದೇಶದಂತೆ ಬಂಧನದಂತಹ ಆತುರದ ನಿರ್ಧಾರ ಕೈಗೊಳ್ಳಬಾರದು ಮತ್ತು ವಿಚಾರಣೆಗೆ ಹಾಜರಾಗುವುದಕ್ಕೆ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದ್ದ ಆದೇಶವನ್ನು ವಿಸ್ತರಿಸಿರುವುದಾಗಿ ತಿಳಿಸಿದೆ.






