ಯುವಜನ

ಮದುವೆಯ ಮುನ್ನ ಮದುಮಗ ಹಠಾತ್ ಹೃದಯಾಘಾತದಿಂದ ಸಾವು 

Views: 188

ಚಿಕ್ಕೋಡಿ: ಮದುವೆಗೆ ಒಂದು ದಿನ ಮುನ್ನ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಝುಂಜರವಾಡ ಆರ್ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ ಹೋಸಲ್ಕಾರ (31) ಮೃತಪಟ್ಟಿದ್ದಾರೆ.

ಸೆಪ್ಟೆಂಬರ್ 5ರಂದು ಈ ಯುವಕನ ಮದುವೆ ನಿಶ್ಚಯವಾಗಿತ್ತು. ಕುಟುಂಬ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಮನೆ ಮುಂದೆ ಮದುವೆಪೂರ್ವ ಸಿದ್ಧತೆ ನಡೆಸಲಾಗುತ್ತಿತ್ತು. ಸದಾಶಿವ ಸ್ನೇಹಿತನ ಜೊತೆಗೆ ಮದುವೆ ಕೆಲಸದ ಬಗ್ಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಅಷ್ಟರಲ್ಲೇ ಯುವಕನ ಪ್ರಾಣಪಕ್ಷಿ ಹಾರಿ ಹೋಗಿದೆ.

ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Related Articles

Back to top button
error: Content is protected !!