ಜನಮನ

ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಇಬ್ಬರು ವಿದ್ಯಾರ್ಥಿಗಳು ಸಾವು, ಮೂವರ ಸ್ಥಿತಿ ಚಿಂತಾಜನಕ

Views: 233

ರಾಯಚೂರು:ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ಮಾನವಿ ತಾಲೂಕಿನ ಕಪಗಲ್ ಗ್ರಾಮದ ಹಳ್ಳದ ಬಳಿ ಘಟನೆ ನಡೆಯಿತು.ಮಾನವಿ ಪಟ್ಟಣದ ಲೋಯೋಲೋ ಶಾಲೆಯ ಬಸ್ ಮಾನವಿ ಕಡೆ ಹೊರಟಿತ್ತು. ಮಾನವಿ ಪಟ್ಟಣದಿಂದ ರಾಯಚೂರು ಕಡೆಗೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಕಪಗಲ್ ಗ್ರಾಮದ ಹಳ್ಳದ ಬಳಿ ಎರಡೂ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದಿವೆ.ಶಾಲಾ‌ ಬಸ್‌‌ನಲ್ಲಿದ್ದ 40 ವಿದ್ಯಾರ್ಥಿಗಳಲ್ಲಿ ನಾಲ್ಕು ವಿದ್ಯಾರ್ಥಿಗಳ ಕಾಲು ತುಂಡಾಗಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾನವಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

 

Related Articles

Back to top button
error: Content is protected !!