ಸಾಮಾಜಿಕ

ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪತ್ನಿ

Views: 332

ಬೆಂಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಗೃಹಿಣಿ ಇಂದು ಚಿಕಿತ್ಸೆಗೆ ಸ್ಪಂದಿಸದೆ ಯುವತಿ ಸಾವನ್ನಪ್ಪಿದ್ದಾರೆ.ಹುಳಿಮಾವಿನ ಅಕ್ಷಯನಗರದ ಅನುಷಾ ಮೃತ ಮಹಿಳೆ.

ಅನುಷಾ ಅವರಿಗೆ 5 ವರ್ಷದ ಹಿಂದೆ ಶ್ರೀಹರಿ ಎಂಬಾತನ ಜೊತೆಗೆ ವಿವಾಹವಾಗಿತ್ತು. ಈ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಗಂಡನ ಮೇಲೆ ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ಗಂಡನ ಜೊತೆ ಜಗಳ ಮಾಡುತ್ತಿದ್ದ ಅನುಷಾಗೆ ಶ್ರೀಹರಿ ಡಿವೋರ್ಸ್‌ ಕೊಡುವಂತೆ ಪೀಡಿಸುತ್ತಿದ್ದ. ಎರಡು ದಿನದ ಹಿಂದೆ ಅನುಷಾ, ಶ್ರೀಹರಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡಿದ್ದಾಳೆ. ಗಂಡ ಶ್ರೀಹರಿ ವಿಡಿಯೋ ಕಾಲ್‌ನಲ್ಲಿರುವಾಗಲೇ ಅನುಷಾ ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.

ಅನುಷಾ ಬೆಂಕಿ ಹಚ್ಚಿಕೊಳ್ಳೋದು ನೋಡಿದ್ರೂ ಶ್ರೀಹರಿ ಸುಮ್ಮನಾಗಿದ್ದ. ಅನುಷಾಳನ್ನು ಕಾಪಾಡಬಹುದಿತ್ತು ಆದ್ರೂ ಕಾಪಾಡಿಲ್ಲ. ಸಾಯಲಿ ಅಂತಾನೇ ಸುಮ್ಮನೆ ಇದ್ದಾನೆ. ಮದುವೆ ಆದಾಗಿನಿಂದಲೂ ಚಿತ್ರಹಿಂಸೆ ನೀಡ್ತಾನೆ ಇದ್ದ ಎಂದು ಆರೋಪಿಸಿದ್ದಾರೆ.ಹುಳಿಮಾವಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!