ಯುವಜನ

ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿಯ ಬಾಲಕ ಕೇರಳದಲ್ಲಿ ಪತ್ತೆ

Views: 109

ಉಡುಪಿ: ಕೋಚಿಂಗ್ ಸೆಂಟರ್‌ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಸೋಮವಾರ ಬೆಳಿಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ.

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂದಿದೆ. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಪೋಷಕರು ಓದುವಂತೆ ಬುದ್ಧಿ ಮಾತು ಹೇಳಿರುವುದೇ ಆತ ಮನೆ ಬಿಟ್ಟು ಹೋಗಲು ಕಾರಣ ಎಂದು ತಿಳಿಯಲಾಗಿದೆ ಆದರೆ ತನ್ನ ಸ್ನೇಹಿತರಲ್ಲಿ ರೈಲಿನಲ್ಲಿ ಹೋಗುವುದಾಗಿ ತಿಳಿಸಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ

Related Articles

Back to top button
error: Content is protected !!