ಸಾಂಸ್ಕೃತಿಕ
ಕಾರು ಅಪಘಾತ ಕನ್ನಡತಿ ಧಾರಾವಾಹಿ ನಟ ಕಿರಣ್ ರಾಜ್ ಗಂಭೀರ

Views: 371
ಬೆಂಗಳೂರು, ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಹಾಗೂ ಚಿತ್ರ ನಟ ಕಿರಣ್ ರಾಜ್ ಮರ್ಸಿಡಿಸ್ ಬೆಂಜ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಕಿರಣ್ ರಾಜ್ ಎದೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿ ಕೆಂಗೇರಿ ಬಳಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ನಿನ್ನೆ ಕಿರಣ್ ರಾಜ್ ತೆರಳಿ ವಾಪಾಸು ಬರುವಾಗ ಅವರು ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿ,ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿಯಲ್ಲದೇ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರ ಜೊತೆ ಕಾರಿನಲ್ಲಿದ್ದ ಕಾರ್ಯಕಾರಿ ನಿರ್ಮಾಪಕ ಸೀಟ್ ಬೆಲ್ಟ್ ಹಾಕಿದ್ದ ಕಾರಣ ಬಚಾವ್ ಆಗಿದ್ದಾರೆ.ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅಪಘಾತ ಸಂಭವಿಸಿದೆ.






