ಧಾರ್ಮಿಕ

ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ; ಅಂಗಡಿ, ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ 

Views: 63

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ  ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.ನಾಗಮಂಗಲ ಉದ್ನಿಗ್ನ ಸ್ಥಿತಿ ಉಂಟಾಗಿದೆ.

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ರಾತ್ರಿ ಮೂರ್ತಿಯ ವಿಸರ್ಜನೆ ಮೆರವಣಿಗೆ ಅನ್ಯಕೋಮಿನ ಪ್ರಾರ್ಥನಾ ಮಂದಿರದ ಬಳಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

3 ದಿನ 144 ಸೆಕ್ಷನ್ ಜಾರಿ- ಐಜಿಪಿ: “ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಕೆಲವು ಅಂಗಡಿ ಮತ್ತು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದೆ. ಎಲ್ಲೆಡೆ ಭದ್ರತೆ ನೀಡಿದ್ದೇವೆ. ಪರಿಸ್ಥಿತಿ ಹತೋಟಿಗೆ ಬಂದಿದೆ. ಮೂರು ದಿನಗಳವರೆಗೆ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಕೆಲವರನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ” ಎಂದು ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ತಿಳಿಸಿದರು.

“ಗಣೇಶ ಮೂರ್ತಿಯ ಮೆರವಣಿಗೆ ಹೆಚ್ಚು ಹೊತ್ತು ಮಸೀದಿಯ ಮುಂದೆ ನಿಂತಿರುವುದಕ್ಕೆ ಎರಡು ಕೋಮುಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ಮಾಡಿದರು. ಬಳಿಕ ಪೊಲೀಸರು ಹೊಡೆದರೆಂದು ಠಾಣೆ ಮುಂದೆ ಕೆಲವರು ಬಂದು ಪ್ರತಿಭಟನೆ ಮಾಡಿದ್ದಾರೆ. ಇನ್ನೊಂದು ಕೋಮಿನವರು ಕಲ್ಲು ತೂರಾಟ ಮಾಡಿದರು. ಎರಡು ಬೈಕ್ ಮತ್ತು ನಾಲ್ಕೈದು ಅಂಗಡಿಗಳಿಗೂ ಬೆಂಕಿ ಹಚ್ಚಿದ್ದಾರೆ. ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ. ಪ್ರಕರಣದ ಬಗ್ಗೆ ತನಿಖೆ ಮಾಡುತ್ತಿದ್ದೇವೆ” ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಪ್ರತಿಕ್ರಿಯಿಸಿದರು.ಬಳಿಕ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು.

Related Articles

Back to top button
error: Content is protected !!