ಆರ್ಥಿಕ
ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ!

Views: 93
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕಚ್ಚಾ ತೈಲ ಬೆಲೆಗಳು ಜನವರಿ 2024 ರಿಂದ ಕಡಿಮೆ ಮಟ್ಟಕ್ಕೆ ಕುಸಿದಿವೆ. ತೈಲ ಬೆಲೆ ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು ಎಂದು ತಿಳಿದುಬಂದಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರ್ಚ್ 14 ರಂದು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಕಡಿತಗೊಳಿಸಿದ್ದವು
ಹರ್ಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾಗಿದ್ದರೆ ಮಹಾರಾಷ್ಟ್ರದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ. ಜೊತೆಗೆ ವಿಧಾನಸಭೆ ಮತ್ತು ಲೋಕಸಭೆಗೆ ಉಪಚುನಾವಣೆ ನಡೆಯಬೇಕಿದೆ. ಈ ಕಾರಣಕ್ಕೆ ಶೀಘ್ರವೇ ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.