ರಾಜಕೀಯ
ಲಂಚ,ಜೀವ ಬೆದರಿಕೆ ಆರೋಪ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

Views: 110
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ್ದು, ಆರೋಪದಡಿಯಲ್ಲಿ ದೂರು ದಾಖಲಾಗಿದೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮಾಜಿ ಸಚಿವ ಮುನಿರತ್ನ, ಆಪ್ತ ಸಹಾಯಕ ವಿ.ಜಿ ಕುಮಾರ್, ಸೆಕ್ಯೂರಿಟಿ ಅಭಿಷೇಕ್, ವಸಂತ್ ಕುಮಾರ್ ಮೇಲೆ ಎಫ್‌ಐಆರ್ ದಾಖಲಾಗಿದೆ.






