ಸಾಮಾಜಿಕ
ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದ ಬಳಿಕ ತಾನೂ ನೇಣಿಗೆ ಶರಣಾದ ತಾಯಿ

Views: 79
ವಿಜಯನಗರ: ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಸಾಯಿಸಿದ ತಾಯಿ ಬಳಿಕ ನೇಣಿಗೆ ಶರಣಾಗಿದ್ದಾಳೆ. ಶಿವಮ್ಮ(24) ಮೂರು ವರ್ಷದ ದುರ್ಗಮ್ಮ, 10 ತಿಂಗಳ ಈಶ್ವರಿ ಮೃತ ದುರ್ದೈವಿಗಳು.
ವಿಜಯನಗರದ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹ ಶಂಕೆ ಇದ್ದು, ಘಟನೆ ಬಳಿಕ ಪತಿ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.






