ರಾಜಕೀಯ
ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಕೇಜ್ರಿವಾಲ್

Views: 180
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ.
ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೇ ಸೆಪ್ಟೆಂಬರ್ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಜೈಲಿಂದ ರಿಲೀಸ್ ಆದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಚುನಾವಣೆಯೊಂದಿಗೆ ದೆಹಲಿ ವಿಧಾನಸಭಾ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.






