ಧಾರ್ಮಿಕ
BREAKING:ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ತಂದೆ, ಮಗ ಸೇರಿ ಮೂವರು ಸಾವು

Views: 95
ತುಮಕೂರು:ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ.
ಗ್ರಾಮದ ರೇವಣ್ಣ (ತಂದೆ), ಇವರ ಮಗ ಶರತ್ ಹಾಗೂ ದಯಾನಂದ್ ಎನ್ನುವ ಯುವಕ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ನೆರವೇರಿಸಲಾಗಿತ್ತು. ಬಳಿಕ ಮೆರವಣಿಗೆ ಮಾಡಿದ ನಂತರ ಗಣೇಶನನ್ನು ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಕೆರೆಯ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಯುವಕ ಸಾವನ್ನಪ್ಪಿದ್ದಾರೆ.






