ಕ್ರೀಡೆ
ವಿದ್ಯಾರಣ್ಯ ಶಾಲೆಯ ನವ್ಯಾ ಶೆಟ್ಟಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 54
ಕುಂದಾಪುರ: ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನವ್ಯಾ ಶೆಟ್ಟಿ ಇವಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸೈನ್ಟ್ ಜೋಸೆಫ್ ಶಾಲೆ ಆಯೋಜಿಸಿದ ತಾಲೂಕು ಮಟ್ಟದ ತ್ರೋ ಬಾಲ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈಕೆ ಪ್ರಭಾಕರ ಶೆಟ್ಟಿ ಮತ್ತು ಪ್ರೇಮ ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ 8ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.ಇವಳನ್ನು ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ,ಟ್ರಸ್ಟ್ ನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿನಿಗೆ ಪ್ರಶಂಸಿಸಿ ಶುಭ ಹಾರೈಸಿದರು.ಶಾಲೆಯ ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕರಾದ ಸತೀಶ್,ಸೂರ್ಯ ಹಾಗೂ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ಮಾಡಿರುತ್ತಾರೆ






