BJP ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ನಾವು ಎಂದಿಗೂ ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Views: 37
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಎಂದಿಗೂ ಒಪ್ಪುವುದಿಲ್ಲ. ಪಕ್ಷದಲ್ಲಿ ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಬಹಳ ಕಿರಿಯವ.ಅವರಿಗೆ ಸಿದ್ಧಾಂತ ಗೊತ್ತಿಲ್ಲ ಅವನು ಅಧ್ಯಕ್ಷನಾಗಿದ್ದಕ್ಕೆ ನನ್ನ ವಿರೋಧವಿದೆ ಆದರೆ ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ನಾನು ಬಿ.ಎಸ್.ಯಡಿಯೂರಪ್ಪ ಅವರನ್ನು ಎಂದಿಗೂ ವಿರೋಧಿಸುವುದಿಲ್ಲ. ಅವರು ಪಕ್ಷದ ಪ್ರಶ್ನಾತೀತ ನಾಯಕ.
ರಾಜ್ಯದಲ್ಲಿ 120ರಿಂದ 130 ಸ್ಥಾನ ಗೆಲ್ಲಿಸಿಕೊಂಡು ಬರುವ ಶಕ್ತಿ ನಮ್ಮಲ್ಲಿದೆ. 15ರಿಂದ 20 ಜನರಿಗೆ ಸಾಮೂಹಿಕವಾಗಿ ನಾಯಕತ್ವ ಕೊಡಿ. ಇಂಥ ಕೆಲಸ ಮಾಡುವಂತೆ ಟಾಸ್ಕ್ ಕೊಡಿ. ಅದರಲ್ಲಿ ವಿಫಲವಾದರೆ, ಪಕ್ಷದಿಂದ ಹೊರಹಾಕಿ ಎಂದಿದ್ದೇವೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿ ಅಗತ್ಯವಿದೆ. ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ’ ಎಂದು ಹೇಳಿದರು
ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಹೇಳಿದ್ದೇವೆ ಒಬ್ಬರ ಕಪಿಮುಷ್ಠಿಯಲ್ಲಿ ಪಕ್ಷ ಇರಬಾರದು ಒಬ್ಬರ ಕೈಗೆ ಪಕ್ಷ ಸಿಕ್ಕಿದರೆ ನಾನು ಕೂಡ ಎರಡನೇ ಯಡಿಯೂರಪ್ಪ ಆಗುತ್ತೇನೆ ಎಂದರು.






