ರಾಜಕೀಯ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಆಯ್ಕೆ

Views: 240

ದೆಹಲಿ:ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಶಾಸಕಾಂಗ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನಿಷ್ಠರಾಗಿರುವ ಆತಿಶಿ ಅವರಿಗೆ ದೆಹಲಿ ಸಿಎಂ ಸ್ಥಾನ ಒಲಿದು ಬಂದಿದೆ.ಆತಿಶಿ ಅವರನ್ನು ಒಮ್ಮತದಿಂದ ಸಿಎಂ ಹುದ್ದೆಗೆ ಆಯ್ಕೆ ಮಾಡಲಾಯಿತು.

ದೆಹಲಿ ಸರ್ಕಾರದ ಏಕೈಕ ಮಹಿಳಾ ಸಚಿವೆಯಾಗಿರುವ ಆತಿಶಿ, ಕೇಜ್ರಿವಾಲ್ ಅವರ ಆಪ್ತ ಮತ್ತು ನಂಬಿಕಸ್ಥ ಬಳಗದಲ್ಲಿ ಗುರುತಿಸಿಕೊಂಡವರು. ಶಿಕ್ಷಣ, ಇಂಧನ, ಪಿಡಬ್ಲೂಡಿ ಸೇರಿದಂತೆ ಹಲವು ಪ್ರಬಲ ಖಾತೆಗಳನ್ನು ಇವರು ಹೊಂದಿದ್ದಾರೆ.

ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರ ಸಮಿತಿ (ಪ್ಯಾಕ್) ಸಭೆಯಲ್ಲಿ ಆತಿಶಿ ಹೆಸರು ಪ್ರಸ್ತಾಪಿಸಲಾಗಿದ್ದು, ಪಕ್ಷದ ಸದಸ್ಯರು ಸಹಮತ ಸೂಚಿಸಿದ್ದರು.

ಅಬಕಾರಿ ನೀತಿ ಹಗರಣದಲ್ಲಿ ಸಿಲುಕಿ ಷರತ್ತುಬದ್ದ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಕೇಜ್ರಿವಾಲ್ ಶುಕ್ರವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ್ದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ್ಮದಿನದಂದು ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇಂದು ಸಂಜೆ ಅವರು ಲೆಫ್ಟಿನೆಂಟ್ ಗವರ್ನರ್‌ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

Related Articles

Back to top button
error: Content is protected !!