ರೆಸಾರ್ಟ್ ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ದೂರು

Views: 93
ಬೆಂಗಳೂರು:ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್‌ಗೆ ಈ ಪ್ರಕರಣವೇ ದೊಡ್ಡ ಅಸ್ತ್ರವಾಗಿ ಸಿಕ್ಕಿದ್ದು, ಇದೀಗ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ.
ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ಬಳು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ.






