ಕರಾವಳಿ
ಧರ್ಮಸ್ಥಳ ಸಂಘದ ಪ್ರತಿನಿಧಿಯೊಬ್ಬರು ಕಂತಿನ ಹಣ ನೀಡುವಂತೆ ಅವಾಚ್ಯ ಶಬ್ದಗಳಿಂದ ನಿಂದನೆ: ಮಹಿಳೆ ಆತ್ಮಹತ್ಯೆ

Views: 284
ಮಳವಳ್ಳಿ:ತಾಲ್ಲೂಕಿನ ಮಲಿಯೂರಿನ ಗೃಹಿಣಿ ಮಹಾಲಕ್ಷ್ಮಿ (35) ಬುಧವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲದ ಕಂತಿನ ಹಣ ತುಂಬುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣ ಎಂದು ಅವರ ಪತಿ ಮಲ್ಲು ಕಿರುಗಾವಲು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತ್ನಿಯು ಐದು ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ 2 ಲಕ್ಷ ಸಾಲ ಪಡೆದಿದ್ದರು. ಪ್ರತಿ ಬುಧವಾರ 1,700 ಕಂತು ತುಂಬಬೇಕಿತ್ತು. ಸಂಸ್ಥೆಯ ಪ್ರತಿನಿಧಿಯೊಬ್ಬರು ಮನೆಯ ಬಳಿ ಬಂದು ಕೂಡಲೇ ಕಂತಿನ ಹಣ ನೀಡುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅದರಿಂದ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡರು ಎಂದು ಆರೋಪಿಸಿದ್ದಾರೆ.






