ಗುರುಕುಲ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಫುಟ್ಬಾಲ್ ಕ್ರೀಡಾಕೂಟ ಉದ್ಘಾಟನೆ

Views: 115
ಕೋಟೇಶ್ವರ:ಯುವಕರ ಮಾನಸಿಕ ಸ್ಥಿರತೆ ಗಟ್ಟಿಗೊಳ್ಳಬೇಕಾದರೆ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕ್ರೀಡೆ ಅತ್ಯವಶ್ಯಕ ಎಂದು ಬಾಂಡ್ಯ ಎಜುಕೇಷನಲ್ ಟ್ರಸ್ಟ್(ರಿ) ಇದರ ಜಂಟಿ ಆಡಳಿತ ನಿರ್ದೇಶಕರು ಶ್ರೀ ಕೆ.ಸುಭಾಶ್ಚಂದ್ರ ಶೆಟ್ಟಿ ಹೇಳಿದರು.
ಅವರು ಸೆ.20ರಂದು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಹಾಗೂ ಗುರುಕುಲ ಪದವಿಪೂರ್ವ ಕಾಲೇಜು ವಕ್ವಾಡಿ, ಕೋಟೇಶ್ವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪುಟ್ಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿದ ಅವರು ಆಟಗಳಿಗೆ ಮೊದಲು ಕ್ರೀಡಾ ಮನೋಭಾವದ ಅವಶ್ಯಕತೆ ಇದೆ. ಮನಸ್ಸಿನ ಶಾಂತಿಗಾಗಿ ಕ್ರೀಡೆ ಬೇಕು ಕೇವಲ ಬಹುಮಾನ ಗೆಲ್ಲಲು ಅಲ್ಲ ಎಂಬುದಾಗಿ ತಿಳಿಹೇಳಿದರು.
ಈ ಸಂದರ್ಭದಲ್ಲಿ ಬಾಂಡ್ಯ ಎಜುಕೇಷನಲ್ ಟ್ರಸ್ಟ್ (ರಿ) ಇದರ ಜಂಟಿ ಆಡಳಿತ ನಿರ್ದೇಶಕಿ ಶ್ರೀಮತಿ ಅನುಪಮಾ ಎಸ್.ಶೆಟ್ಟಿ, ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ಗೌರವಾಧ್ಯಕ್ಷರು ಶ್ರೀ ಜೀವನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಕುಂದಾಪುರ ತಾಲ್ಲೂಕು ಕ್ರೀಡಾ ಸಂಯೋಜಕರಾದ ಶ್ರೀ ರಾಮ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಅವಿನಾಶ್ ಆಚಾರ್ಯ ಅತಿಥಿಗಳನ್ನು ಸ್ವಾಗತಿಸಿದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಪವಿತ್ರಾ ಶೆಟ್ಟಿ ವಂದಿಸಿದರು.ಕನ್ನಡ ಉಪನ್ಯಾಸಕ ನಾಗರಾಜ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿದರು.







