ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆಯಲ್ಲಿ ಲಾರಿ ಇಂಜಿನ್, ಸ್ಕೂಟಿ, ಮೂಳೆ ಪತ್ತೆ

Views: 305
ಉತ್ತರ ಕನ್ನಡ:ಶಿರೂರು ಗುಡ್ಡ ಕುಸಿತದಿಂದ ಅಂಕೋಲಾದ ಗಂಗಾವಳಿ ನದಿಯಲ್ಲಿ ಬಿದ್ದಿರುವ ಅವಶೇಷಗಳ ಪತ್ತೆ ಕಾರ್ಯ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನೀರಿನ ಆಳದಲ್ಲಿ ಲಾರಿಯ ಇಂಜಿನ್, ಸ್ಕೂಟಿ ಮತ್ತು ಮೂಳೆಯೊಂದು ಸಿಕ್ಕಿದ್ದು, ಅದನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ.
ಮೂರನೇ ದಿನದ ಡ್ರೆಜ್ಜರ್ ಕಾರ್ಯಾಚರಣೆಯಲ್ಲಿ ಮೂಳೆ ದೊರೆತಿದೆ. ಇದು ನಾಪತ್ತೆಯಾದ ಮೂವರಲ್ಲಿ ಯಾರದ್ದೆಂದು ತಿಳಿಯಲು ಡಿಎನ್ಎ ಟೆಸ್ಟ್ಕ ಗೆ ಳುಹಿಸಲಾಗಿದೆ.
ಕಾರ್ಯಾಚರಣೆ ವೇಳೆ ಪತ್ತೆಯಾದ ಲಾರಿಯ ಇಂಜಿನ್ ಬೆಂಜ್ ಲಾರಿಯದ್ದೋ ಅಥವಾ ಕೊಚ್ಚಿ ಹೋದ ಟ್ಯಾಂಕರ್ನದ್ದೋ ಎಂಬುದು ಖಚಿತವಾಗಿಲ್ಲ. ಶನಿವಾರದ ಕಾರ್ಯಾಚರಣೆಯಲ್ಲಿ ಟ್ಯಾಂಕರ್ನ ಕ್ಯಾಬಿನ್ನ ಭಾಗ ಹಾಗೂ ಟ್ಯಾಂಕರ್ನ ಎದುರಿನ ಎರಡು ಟಯರ್ಗಳು ಕಂಡುಬಂದಿದ್ದವು
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಗಂಗಾವಳಿ ನದಿಯಲ್ಲಿ ಮೃತದೇಹ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಪ್ರಯತ್ನ ಮಾಡಲಾಗುತ್ತಿದೆ. ಈಗ 10 ದಿನಗಳ ಕಾಲ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಕೆಲವು ವಸ್ತುಗಳು ಸಿಗುತ್ತಿವೆ. ಇದಕ್ಕಿಂತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಲಾರಿ, ನಾಪತ್ತೆಯಾದವರ ಕುರುಹು ಸಿಗಬಹುದು ಎಂಬ ನಿರೀಕ್ಷೆ ಇದೆ. ಇಲ್ಲದಿದ್ದರೆ ಕಾರ್ಯಾಚರಣೆಯನ್ನು ಬಂದ್ ಮಾಡುವ ಯೋಚನೆ ಇದೆ ಎಂದು ತಿಳಿಸಿದರು.






