ಆರೋಗ್ಯ

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವು, ವೈದ್ಯರ ನಿರ್ಲಕ್ಷ್ಯಕ್ಕೆ ದೂರು

Views: 111

ಮಂಗಳೂರು: ನಗರದ ಕಂಕನಾಡಿಯ ಬೆಂದೂರ್ ವೆಲ್ ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.ಈ ಬಗ್ಗೆ ಶಮನ್ ಇಬ್ರಾಹಿಂ ನೀಡಿದ ದೂರಿನಂತೆ ಕದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಮೃತಪಟ್ಟವರು.

ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದರು. ಮಾಝಿನ್ ರೊಂದಿಗೆ ಅವರ ತಾಯಿ ಮತ್ತು ಪತ್ನಿ ಹೊರಗಡೆ ಇದ್ದಿದ್ದು.ಅರ್ಧ ಗಂಟೆಯಲ್ಲಿ ನಡೆಯಬಹುದಾದ  ಶಸ್ತ್ರ ಚಿಕಿತ್ಸೆಯು ಸಂಜೆಯಾದರೂ ಮುಗಿಯಲಿಲ್ಲ ಎನ್ನಲಾಗಿದೆ.ಸಂಶಯಗೊಂಡ ಮಾಝಿನ್ ರ ತಾಯಿ ಮತ್ತು ಪತ್ನಿ ವೈದ್ಯರಲ್ಲಿ ವಿಚಾರಿಸಿದಾಗ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎಂಬ ಉತ್ತರ ಲಭಿಸಿದೆ. ತಕ್ಷಣ ಅಲ್ಲಿಂದ ಕೋಡಿಯಾಲ್ ಬೈಲ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವುದಾಗಿ ಘೋಷಿಸಿದರು.

ವೈದ್ಯರ ನಿರ್ಲಕ್ಷ್ಯದ ಆರೋಪ: ಮಾಝಿನ್ ಪ್ರಾಣ ಕಳಕೊಳ್ಳಲು ಫ್ಲೋಂಟ್ ಕ್ಲಿನಿಕ್ ನ ವೈದ್ಯರ ನಿರ್ಲಕ್ಷ್ಯವೇ ಕಾರಣವಾಗಿದೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿದ್ದರಿಂದ ಹೀಗಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

 

Related Articles

Back to top button