ಜನಮನ

ಮತ್ತೆ ಮಳೆ ಅಬ್ಬರ: ಉಡುಪಿ,ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌ ಘೋಷಣೆ 

Views: 122

ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ಸೆ.25ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

 

 

 

Related Articles

Back to top button
error: Content is protected !!