ರಾಜಕೀಯ
ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ:ಕೋಟ ಶ್ರೀನಿವಾಸ ಪೂಜಾರಿ

Views: 31
ಉಡುಪಿ:ಸಿದ್ದರಾಮಯ್ಯ ತಮ್ಮ ಮಾತಿಗೆ ಬದ್ಧರಾಗಿ ರಾಜೀನಾಮೆ ಕೊಡುವವರೆಗೆ ಬಿಜೆಪಿ ತನ್ನ ಹೋರಾಟವನ್ನು ನಿಲ್ಲಿಸುವುದಿಲ್ಲ. ಬೆಂಗಳೂರಿನಲ್ಲಿ ಗಾಂಧಿ ಪ್ರತಿಮೆ ಮುಂದೆ ಹೋರಾಟ ಆರಂಭವಾಗಿದ್ದು, ರಾಜ್ಯಾದ್ಯಂತ ಮುಂದುವರಿಯಲಿದೆ.
ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ತನಿಖೆಗೆ ಅನುಮತಿ ನೀಡಿದಾಗ ಸಿದ್ದರಾಮಯ್ಯನವರು ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಅದೇ ಮಾನದಂಡವನ್ನು ಅನುಸರಿಸಿ ಈಗ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.






