ಕೃಷಿ

ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ!

Views: 147

ಚಿಕ್ಕೋಡಿ: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದೆ.

ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆ ಮೇಲೆ ತನ್ನ‌ ಕಾಮದ ಕಣ್ಣಿಟ್ಟಿದ್ದ ಕಾಮುಕ ಉದ್ದಪ್ಪ ರಾಮಪ್ಪ, ಯಾರು ಇಲ್ಲದೆ ಇರುವಾಗ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿದ್ದ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್‌ ಕೊಡಿಸಿ ಪುಸಲಾಯಿಸಿದ್ದ ವ್ಯಕ್ತಿ ಬಳಿಕ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ತನ್ನ ಕೃತ್ಯ ಎಲ್ಲಿ ಹೊರಬರುತ್ತೋ ಎಂದು ನಂತರ ಮಗುವಿನ ಕಣ್ಣು, ಮೂಗಿಗೆ ಮಣ್ಣು ಹಾಕಿ ಕೊಲೆ ಮಾಡಿದ್ದ.

ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದೆ.

Related Articles

Back to top button
error: Content is protected !!