ಶಿಕ್ಷಣ
ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ರಶ್ಮಿತಾ ಆರ್ ತಾಲೂಕು ಮಟ್ಟದ ಸಾಕ್ಷರತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Views: 145
ಶಂಕರನಾರಾಯಣ: ಜಿಲ್ಲಾಪಂಚಾಯತ್ ಉಡುಪಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ನಿಮಿತ್ತ ಕುಂದಾಪುರ ತಾಲೂಕು ಮಟ್ಟದ ಸಾಕ್ಷರತೆ ಕುರಿತು ನಡೆದ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿನಿ ಕುಮಾರಿ ರಶ್ಮಿತಾ ಆರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ಆಡಳಿತ ಮಂಡಳಿ,ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಪ್ರತಿನಿಧಿಗಳು ವಿಜೇತ ವಿದ್ಯಾರ್ಥಿನಿಗೆ ಶುಭ ಕೋರಿರುತ್ತಾರೆ.