ಯುವಜನ

ಕೋಟೇಶ್ವರ: ತರಗತಿ ಮುಗಿಸಿಕೊಂಡು ತೆರಳುತ್ತಿದ್ದ ವೇಳೆ ಟಿಪ್ಪರ್ ಮೈಮೇಲೆ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

Views: 862

ಕೋಟೇಶ್ವರ :ತರಗತಿ ಮುಗಿಸಿಕೊಂಡು ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ತೆರಳುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಮೈಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಧನುಷ್ (19)ಮೃತಪಟ್ಟ ವಿದ್ಯಾರ್ಥಿ

ಅತಿ ವೇಗವಾಗಿ ಬಂದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋಗಿ ಪುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಯ ಮೈಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಧನುಷ್ ತನ್ನ ತಾಯಿಯೊಂದಿಗೆ ನಾಗೂರಿನಲ್ಲಿ ವಾಸವಾಗಿದ್ದಾನೆ ಎಂದು ತಿಳಿದುಬಂದಿದೆ.

ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!